ಹುಬ್ಬಳ್ಳಿ: ಕಾಶ್ಮೀರದ ಒಟ್ಟು ಸಮಸ್ಯೆಗಳಿಗೆ ಮೂಲ ಕಾರಣವೇ ಕಾಂಗ್ರೆಸ್ ಎನ್ನುವುದನ್ನು ಸಚಿವ ಸಂತೋಷ ಲಾಡ್ ಅರ್ಥ ಮಾಡಿಕೊಳ್ಳಬೇಕು. ಪಹಲ್ಗಾಮ್ ದಾಳಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆ ಕೇಳುತ್ತಿರುವುದು ಹಾಸ್ಯಾಸ್ಪದ’ ಎಂದು ಶಾಸಕ ಮಹೇಶ ಟೆಂಗಿನಕಾಯಿ ವ್ಯಂಗ್ಯವಾಡಿದರು.
ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ದಾಳಿ ನಡೆದ ತಕ್ಷಣವೇ ವಿದೇಶ ಪ್ರವಾಸದಲ್ಲಿದ್ದ ನರೇಂದ್ರ ಮೋದಿ ಅವರು ದೇಶಕ್ಕೆ ವಾಪಸ್ಸಾಗಿ, ತುರ್ತು ಸಭೆ ನಡೆಸಿ ಪಾಕಿಸ್ತಾನದ ವಿರುದ್ಧ ಕೈಗೊಳ್ಳಬೇಕಾದ ಗಟ್ಟಿ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಇದಕ್ಕೆ ವಿರೋಧ ಪಕ್ಷದ ನಾಯಕರು ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡರು ಅಸಂಬದ್ಧ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.