Home ತಾಜಾ ಸುದ್ದಿ ಕಾಸಿಗಾಗಿ ಹುದ್ದೆ ಮಾರಿಕೊಂಡಿರುವ ಅನುಮಾನ

ಕಾಸಿಗಾಗಿ ಹುದ್ದೆ ಮಾರಿಕೊಂಡಿರುವ ಅನುಮಾನ

0

OMR ಶೀಟ್ ತಿದ್ದಿ ಹುದ್ದೆ ಗಿಟ್ಟಿಸಿಕೊಂಡಿರುವ ಅಕ್ರಮ ಬೆಳಕಿಗೆ

ಬೆಂಗಳೂರು: ಕಾಸಿಗಾಗಿ ಹುದ್ದೆ ಮಾರಿಕೊಂಡಿರುವ ಅನುಮಾನ ಮೂಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಎರಡೆರಡು ಬಾರಿ ಎಡವಟ್ಟು ಮಾಡಿ ಗ್ರಾಮೀಣ ಭಾಗದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿರುವ ಕಾಂಗ್ರೆಸ್ ಸರ್ಕಾರ ಈಗ ಮತ್ತೊಂದು ಅಕ್ರಮ ನಡೆಸಿರುವದು ಬೆಳಕಿಗೆ ಬಂದದೆ.
ಜುಲೈ 2023ರಲ್ಲಿ ಎಇಇ ಹುದ್ದೆಗೆ ಕೆಪಿಎಸ್ಸಿ ನಡೆಸಿದ ಪರೀಕ್ಷೆಯಲ್ಲಿ 10 ಅಭ್ಯರ್ಥಿಗಳು OMR ಶೀಟ್ ತಿದ್ದಿ ಹುದ್ದೆ ಗಿಟ್ಟಿಸಿಕೊಂಡಿರುವ ಅಕ್ರಮ ಬೆಳಕಿಗೆ ಬಂದಿದ್ದು ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಕಾಸಿಗಾಗಿ ಹುದ್ದೆ ಮಾರಿಕೊಂಡಿರುವ ಅನುಮಾನ ಮೂಡುತ್ತಿದೆ. ಒಟ್ಟಿನಲ್ಲಿ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರ ಇರುವವರೆಗೂ ಪ್ರಾಮಾಣಿಕ ಅಭ್ಯರ್ಥಿಗಳು ಸರ್ಕಾರಿ ನೌಕರಿ ಪಡೆಯುವ ಆಸೆಯೇ ಇಟ್ಟುಕೊಳ್ಳುವಂತಿಲ್ಲ ಎಂದಿದ್ದಾರೆ.

Exit mobile version