‘ಕಿರಾತಕ’ ಖ್ಯಾತಿಯ ಬಹುಭಾಷಾ ನಟ ಡೇನಿಯಲ್ ಬಾಲಾಜಿ ಹೃದಯಾಘಾತದಿಂದ ನಿಧನ

0
14

ಚೆನ್ನೈ: ತಮಿಳು ನಟ ಡೇನಿಯಲ್ ಬಾಲಾಜಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶುಕ್ರವಾರ ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಚಿಕಿತ್ಸೆ ಪಡೆಯುತ್ತಿರುವಾಗಲೇ ಅವರು ನಿಧನರಾಗಿದ್ದಾರೆ. ಕಳೆದ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ಚೆನ್ನೈನ ಕೊಟ್ಟಿವಾಕಂನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ. ಡೇನಿಯಲ್ ಅವರ ಪಾರ್ಥಿವ ಶರೀರವನ್ನು ಇಂದು ಪುರಸೈವಾಲ್ಕಂನಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ. ಇಂದು ಸಂಜೆ ಅಂತ್ಯಕ್ರಿಯೆ ನೆರವೇರಲಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕಿರಾತಕ ಚಿತ್ರದಲ್ಲಿ ವಿಲನ್‌ ಆಗಿ ನಟಿಸುವ ಮೂಲಕ ಕನ್ನಡಿಗರ ಮನೆಮಾತಾಗಿದ್ದ ನಟ ಡೇನಿಯಲ್‌ ಬಾಲಾಜಿ ಬಹು ಭಾಷಾನಟನಾಗಿಯೂ ಗುರುತಿಸಿಕೊಂಡಿದ್ದರು.

Previous articleಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ
Next articleಕರುಗಳ ಮೇಲೆ‌ ಚಿರತೆ ದಾಳಿ