Home Advertisement
Home ತಾಜಾ ಸುದ್ದಿ ಕುಂಭಮೇಳದಲ್ಲಿ ಕಾಲ್ತುಳಿತ: ಜಾಗರೂಕತೆಯಿಂದಿರಲು ಸಿದ್ದರಾಮಯ್ಯ ಮನವಿ

ಕುಂಭಮೇಳದಲ್ಲಿ ಕಾಲ್ತುಳಿತ: ಜಾಗರೂಕತೆಯಿಂದಿರಲು ಸಿದ್ದರಾಮಯ್ಯ ಮನವಿ

0
122

ಕನ್ನಡಿಗರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳ ನಿಯೋಜನೆ

ಬೆಂಗಳೂರು: ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಜಾಗರೂಕತೆಯಿಂದಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ. ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂದಿದ್ದಾರೆ.