Home ತಾಜಾ ಸುದ್ದಿ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ: NDRF ತಂಡ ಆಗಮನ

ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ: NDRF ತಂಡ ಆಗಮನ

0

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ.
ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆ ಅಬ್ಬರದ ಹಿನ್ನೆಲೆಯಲ್ಲಿ ಪುತ್ತೂರಿಗೆ 25 ಸಿಬ್ಬಂದಿಯ ಎನ್‌ಡಿಆರ್‌ಎಫ್‌ (NDRF) ಸಿಬ್ಬಂದಿ ಆಗಮಿಸಿದ್ದಾರೆ. ಭಾರೀ ಗಾಳಿ ಮಳೆ ಹಿನ್ನಲೆ ಅಧಿಕಾರಿಗಳಿಗೆ ಸರ್ವ ಸನ್ನದ್ಧ ಆಗಿರಲು ಸೂಚನೆ ನೀಡಲಾಗಿದೆ.
ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಭಕ್ತರು ಸ್ನಾನಘಟ್ಟದ ಬಳಿ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಭಕ್ತರು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ದೇವಸ್ಥಾನದ ಆಡಳಿತ ಸ್ನಾನಘಟ್ಟದ ಸುತ್ತ ಹಗ್ಗವನ್ನು ಕಟ್ಟಿ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಿದ್ದು, ದೇವಸ್ಥಾನದ ಆಡಳಿತವು ಸ್ನಾನಘಟ್ಟದ ಸುತ್ತ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಿದೆ. ಪ್ರಕೃತಿ ವಿಕೋಪ ತಡೆ ಸಿಬ್ಬಂದಿ ನೇಮಕಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

Exit mobile version