ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

0
11
ಸಾವು

ಬೆಳಗಾವಿ: ಕೃಷ್ಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಕಲಿ-ನಸಲಾಪುರ ಕೃಷ್ಣಾ ನದಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ NDRF ಸಿಬ್ಬಂದಿ ಭೇಟಿ ನೀಡಿ ಶವ ಹೊರಕ್ಕೆ ತೆಗೆದಿದ್ದಾರೆ. ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಬಾಬುರಾವ ಸಂಭಾಜಿ ಭಾಸ್ಕರ (40) ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂಕಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Previous articleವಯನಾಡ್ ದುರಂತ: 100 ಮನೆಗಳ ನಿರ್ಮಾಣಕ್ಕೆ ಸಿದ್ದರಾಮಯ್ಯ ಭರವಸೆ
Next articleವಾಲಿಬಾಲ್ ಕ್ರೀಡಾಕೂಟವನ್ನ ಸರ್ವಿಸ್ ಮಾಡುವ ಮೂಲಕ ಉದ್ಘಾಟಿಸಿದ ಖಂಡ್ರೆ