ಕೃಷ್ಣ ನದಿಗೆ ಇಳಿಯದಂತೆ ಎಚ್ಚರಿಕೆ

ಹಿಪ್ಪರಗಿ ಜಲಾಶಯದಿಂದ 40 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ

ಚಿಕ್ಕೋಡಿ: ಕೃಷ್ಣಾ ನದಿಗೆ 25 ಸಾವಿರ ಕ್ಯುಸೆಕ್‌ಗಿಂತಲೂ ಹೆಚ್ಚಿನ ಒಳ ಹರಿವು ಇದ್ದು ಹಿಪ್ಪರಗಿ ಜಲಾಶಯದಿಂದ 40 ಸಾವಿರ ಕ್ಯುಸೆಕ್‌ ನೀರನ್ನು ಹೊರ ಬಿಡಲಾಗಿದ್ದು ನೀರು ಜಾಸ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ನದಿಗೆ ಇಳಿಯದಂತೆ ಚಿಕ್ಕೋಡಿ ತಾಲೂಕಾಡಳಿತ ಎಚ್ಚರಿಕೆ ನೀಡಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಕೃಷ್ಣಾ ನದಿ ಹಾಗೂ ಕೊಲ್ಲಾಪುರದ ಪಂಚಗಂಗಾ ನದಿಯ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಇದರಿಂದಾಗಿ ಪಂಚಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಹಲವು ಬ್ರಿಡ್ಜ್ ಕಮ್ ಬ್ಯಾರೇಜ್ ಮುಳುಗಡೆಯಾಗಿದೆ. ಮುಳುಗಡೆಯಾದ ಸೇತುವೆ ಮೇಲೆ ವಾಹಗಳ ಸಂಚಾರ ಸ್ಥಗಿತಗೊಳಿಸಿದ್ದು ಜಿಲ್ಲಾ ಆಡಳಿತ ಪೋಲಿಸರನ್ನು ನಿಯೋಜಿಸಿದೆ.