ಮಂಡ್ಯ: ಕೆಆರ್‌ಎಸ್ ಕನ್ನಂಬಾಡಿ ಅಣೆಕಟ್ಟೆಗೆ ಒಳ ಹರಿವು ಹೆಚ್ಚಳವಾಗುತ್ತಿರುವ ಹಿನ್ನಲೆ, ಅಣೆಕಟ್ಟೆಯಿಂದ ಯಾವ ಕ್ಷಣದಲ್ಲಾದ್ರೂ ಹೆಚ್ಚಿನ ನೀರು ಬಿಡಬಹುದು ಎಂದು ನದಿ ತೀರದ ನಿವಾಸಿಗಳಿಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಕಾವೇರಿ ಜಲನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ, ಅಣೆಕಟ್ಟೆಗೆ ಒಳ ಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗುತ್ತಿದೆ. ಅಣೆಕಟ್ಟೆಯಿಂದ ಯಾವುದೇ ಕ್ಷಣದಲ್ಲಾದರೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಬಹುದು ಎಂದು ಪ್ರಕಟಣೆ ಮೂಲಕ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಹಾಗಾಗಿ ಕಾವೇರಿ ನದಿ ತೀರದ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಮುಂಜಾಗ್ರತೆಯಾಗಿ ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.
ಪ್ರಸ್ತುತ ಅಣೆಕಟ್ಟೆಗೆ 44,452 ಕ್ಯೂಸೆಕ್ ನೀರು ಒಳ ಬರುತ್ತಿದ್ದು, 2,566 ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಅಣೆಕಟ್ಟೆಯ ಗರಿಷ್ಟ ಮಟ್ಟ 124.80 ಅಡಿಯಾಗಿದ್ದು, ಇಂದು 116,60 ಅಡಿ ದಾಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.