ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ನೀರುಪಾಲು

0
8

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ನೀರು ಪಾಲಾದ ಘಟನೆ ನಡೆದಿದೆ.
ಆಲೂರು ತಾಲ್ಲೂಕಿನ ಕದಾಳು ಸಮೀಪದ ಮುತ್ತಿಗೆಯಲ್ಲಿ ನಡೆದಿದೆ, ಈಜಲು ತೆರಳಿದ್ದ ಐವರು ಬಾಲಕರಲ್ಲಿ, ನಾಲ್ವರು‌ ಮುಳುಗಡೆ ಆಗುತ್ತಿದ್ದರು. ಇತ್ತ ಬದುಕುಳಿದ ಓರ್ವ ಬಾಲಕ ಓಡಿ ಹೋಗಿ ಸಮೀಪದಲ್ಲಿದ್ದವರಿಗೆ ಸುದ್ದಿ ತಿಳಿಸಿದ್ದ. ಆದರೆ ಕೆರೆ ಬಳಿ ಬಂದು ನೋಡುವಷ್ಟರಲ್ಲಿ ನಾಲ್ವರು ಬಾಲಕರು ಮುಳುಗಿದ್ದರು. ಮುತ್ತಿಗೆ ಜೀವನ್(13), ಸಾತ್ವಿಕ್(11), ವಿಶ್ವ(12) ಹಾಗೂ ಪೃಥ್ವಿ (12) ಮೃತ ಬಾಲಕರು. ಮತ್ತೋರ್ವ ಬಾಲಕ ಚಿರಾಗ್ (10) ಬದುಕುಳಿದಿದ್ದು ಅವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಗೆ ರಜೆ ಇರುವುದರಿಂದ ಮೀನು ಹಿಡಿಯಲು ಹೋಗಿದ್ದ ಮಕ್ಕಳು ಒಬ್ಬರನ್ನೊಬ್ಬರು ರಕ್ಷಿಸುವ ಯತ್ನದಲ್ಲಿ ಮುಳುಗಿದ್ದಾರೆ.

Previous articleಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿ
Next articleರಾಮ ಮಂದಿರವಾಯಿತು ಇನ್ನು ಸೀತಾ ಮಂದಿರ ಕಟ್ಟುತ್ತೇವೆ