Home ತಾಜಾ ಸುದ್ದಿ ಕೆಲವೇ ಗಂಟೆಗಳಲ್ಲಿ ದರ್ಶನ್ ಬಳ್ಳಾರಿ ಜೈಲಿಗೆ

ಕೆಲವೇ ಗಂಟೆಗಳಲ್ಲಿ ದರ್ಶನ್ ಬಳ್ಳಾರಿ ಜೈಲಿಗೆ

0

ಬಳ್ಳಾರಿ: ರೇಣುಕಾಸ್ವಾಮಿ ‌ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಕೆಲವೇ ಗಂಟೆಗಳಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಲಿದ್ದಾರೆ.
ಬೆಳಗಿನಜಾವ ೪ ಗಂಟೆ ಸುಮಾರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ನನ್ನು ಪೊಲೀಸ್ ಭದ್ರತೆಯಲ್ಲಿ ಕರೆ ತರಲಾಗುತ್ತಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ಮಾರ್ಗವಾಗಿ ಬಳ್ಳಾರಿ ಜೈಲಿಗೆ ದರ್ಶನ್ ನ್ನು ಕರೆ ತರಲಾಗುತ್ತಿದೆ‌. ಈಗಾಗಲೇ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಳಗ್ಗೆಯಿಂದಲೂ ಎಸ್ಪಿ ಡಾ.ಶೋಭರಾಣಿ‌, ಜೈಲು ಅಧೀಕ್ಷಕಿ ಲತಾ ನೇತೃತ್ವದಲ್ಲಿ ಹೈ ಅಲಟ್೯ ಸಭೆ ಕೂಡ ನಡೆಸಲಾಗಿದೆ. ಹೈ ಸೆಕ್ಯುರಿಟಿ ಇರುವ ಸೆಲ್ ಗೆ ದರ್ಶನ್ ಇರಿಸಲು ಕ್ರಮ ಕೈಗೊಳ್ಳಲಾಗಿದೆ. ದರ್ಶನ್ ಶಿಫ್ಟ್ ಹಿನ್ನೆಲೆ ಬಳ್ಳಾರಿ ಜೈಲು ಮುಂಭಾಗದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜೈಲು ಮಾರ್ಗದ ರಸ್ತೆಗಳಲ್ಲಿ ಸಂಚಾರ‌ ನಿರ್ಬಂಧ ಹೇರಲಾಗಿದೆ.

Exit mobile version