ಹುಬ್ಬಳ್ಳಿ: ಪೌರಕಾರ್ಮಿಕರು ನಗರದ ಸ್ವಚ್ಛತೆಗಾಗಿ ಶ್ರಮಿಸುವ ಶ್ರಮಜೀವಿಗಳು, ಅಂತವರನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.
ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿರುವ ಅವರು ಅವರು ಭಾರತದ 75ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ಹುಬ್ಬಳ್ಳಿಯ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿಯಾದ ಮಾರೆವ್ವ ಸುರಪುರ ಅವರಿಂದ ದ್ವಜರೋಹಣವನ್ನು ನೆರವೇರಿಸಲಾಯಿತು ಹಾಗೂ ಪೌರ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಪೌರಕಾರ್ಮಿಕರು ನಗರದ ಸ್ವಚ್ಛತೆಗಾಗಿ ಶ್ರಮಿಸುವ ಶ್ರಮಜೀವಿಗಳು, ಅಂತವರನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಪೋಸ್ಟ್ ಮಾಡಿದ್ದಾರೆ.