Home ತಾಜಾ ಸುದ್ದಿ ಕೇಂದ್ರ ಸಚಿವೆ ಪ್ರಕರಣಕ್ಕೂ ಸಿಎಂ ಪ್ರಕರಣಕ್ಕೂ ಅಜಗಜಾಂತರ ವ್ಯತ್ಯಾಸ

ಕೇಂದ್ರ ಸಚಿವೆ ಪ್ರಕರಣಕ್ಕೂ ಸಿಎಂ ಪ್ರಕರಣಕ್ಕೂ ಅಜಗಜಾಂತರ ವ್ಯತ್ಯಾಸ

0

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ಗೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ,
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಕಾಂಗ್ರೆಸ್‌ ಪಕ್ಷಕ್ಕೂ 1,200 ಕೋಟಿ ರೂ.ಗೂ ಅಧಿಕ ಹಣ ಬಂದಿದೆ. ಆ ಹಣವನ್ನು ಮೊದಲು ವಾಪಸ್‌ ನೀಡಲಿ, ಆ ನಂತರ ಸಚಿವರ ರಾಜೀನಾಮೆ ಕೇಳಲಿ ಎಂದರು.

Exit mobile version