Home ತಾಜಾ ಸುದ್ದಿ ಕೇಂದ್ರ ಸಚಿವೆ ಬಿಜೆಪಿಯ ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್ ಆದೇಶ

ಕೇಂದ್ರ ಸಚಿವೆ ಬಿಜೆಪಿಯ ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್ ಆದೇಶ

0

ಬೆಂಗಳೂರು: ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿರುವ ಅಪರಾಧಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ.

ನ್ಯಾಯಾಲಯದ ಮೆಟ್ಟಿಲೇರಿದ್ದ ಜನಾಧಿಕಾರ ಸಂಘರ್ಷ ಪರಿಷತ್ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ  ಆದರ್ಶ ಅಯ್ಯರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಗಣಿಸಿರುವ ನ್ಯಾಯಾಲಯವು, ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಅಪರಾಧಕ್ಕಾಗಿ ಎಫ್‌ಐಆರ್ ದಾಖಲಿಸಲು ತಿಲಕ್ ನಗರ ಪೊಲೀಸ್ ಠಾಣೆಗೆ ಆದೇಶಿಸಿದೆ.

Exit mobile version