ಕೇಂದ್ರ ಸರ್ಕಾರದ ನಡೆ ಮುಲಾಜಿಲ್ಲದೆ ಖಂಡಿಸುತ್ತೇವೆ

0
20

ಬೆಂಗಳೂರು: ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ನಾವು ಮುಲಾಜಿಲ್ಲದೆ ಖಂಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ತಮಿಳುನಾಡು ಸಚಿವರ ನಿಯೋಗದ ಭೇಟಿಯ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಿದರು. ಸಚಿವರ ನಿಯೋಗದ ಭೇಟಿಗೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ದೂರವಾಣಿ ಮೂಲಕ ಇದೇ ವಿಚಾರಗಳ ಬಗ್ಗೆ ಮಾತನಾಡಿದರು. ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ನನ್ನ ಬೆಂಬಲ ಸದಾ ಇರಲಿದೆ. ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ನಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Previous articleವಾರ್ಷಿಕೋತ್ಸವ ಆಚರಿಸಿದ ಕಲಬುರಗಿ ವಂದೇ ಭಾರತ್
Next articleಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ