Home News ಕೇಂದ್ರ ಸರ್ಕಾರದ ಸಾಧನೆ ಮಂಡಿಸಿದ ರಾಷ್ಟ್ರಪತಿ ಮುರ್ಮು

ಕೇಂದ್ರ ಸರ್ಕಾರದ ಸಾಧನೆ ಮಂಡಿಸಿದ ರಾಷ್ಟ್ರಪತಿ ಮುರ್ಮು

ಈ ಸರ್ಕಾರದ ಮೂರನೇ ಅವಧಿಯಲ್ಲಿ ಹಿಂದಿನ ಸರ್ಕಾರಗಳಿಗಿಂತಲೂ ಮೂರು ಪಟ್ಟು ಹೆಚ್ಚು ಕೆಲಸ ಮಾಡುತ್ತಿದೆ

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನುದ್ದೇಶಿಸಿ ಮಾತನಾಡಿದ್ದಾರೆ.
ಬಜೆಟ್ ಅಧಿವೇಶನ ಆರಂಭದ ದಿನದಂದು ಲೋಕಸಭೆ ಹಾಗೂ ರಾಜ್ಯಸಭೆಯನ್ನು ಉದ್ದೇಶಿಸಿ ಅವರು ರಾಷ್ಟ್ರಪತಿ ತಮ್ಮ ಭಾಷಣದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಉಭಯ ಸದನಗಳೆದುರು ಮಂಡಿಸಿದರು. ನಮ್ಮ ಬ್ಯಾಂಕಿಂಗ್ ಮತ್ತು ಡಿಜಿಟಲ್ ಪಾವತಿ ಸಖಿಗಳು ದೂರದ ಪ್ರದೇಶಗಳಲ್ಲಿ ಡಿಜಿಟಲ್ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಡ್ರೋನ್ ದೀದಿ ಯೋಜನೆಯು ಮಹಿಳೆಯರ ಆರ್ಥಿಕ ಮತ್ತು ತಾಂತ್ರಿಕ ಸಬಲೀಕರಣದ ಮಾಧ್ಯಮವಾಗಿದೆ. ಇಂದು ನಮ್ಮ ಯುವಕರು ಸ್ಟಾರ್ಟ್‌ಅಪ್‌ನಿಂದ ದೇಶಕ್ಕೆ ಕೀರ್ತಿ ತರುತ್ತಿದ್ದಾರೆ. ಕಳೆದ ದಶಕದಲ್ಲಿ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ ಮತ್ತು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಗಳ ಮೂಲಕ ಯುವಕರಿಗೆ ಹಲವು ಅವಕಾಶಗಳನ್ನು ಒದಗಿಸಲಾಗಿದೆ. ಇಂಟರ್ನ್‌ಶಿಪ್ ಯೋಜನೆಯ ಮೂಲಕ ಯುವಕರಿಗೆ ಹೊಸ ಅನುಭವ ನೀಡಲಾಗುತ್ತಿದೆ.ಉಡಾನ್ ಯೋಜನೆ ಮೂಲಕ ಜನರ ವಿಮಾನ ಪ್ರಯಾಣದ ಕನಸು ನನಸಾಗಿದೆ. ದೇಶದ ಬಡವರು, ಮಹಿಳೆಯರು ಮತ್ತು ವಂಚಿತ ಜನರು ಈ ನಿರ್ಧಾರಗಳಿಂದ ಪ್ರಯೋಜನ ಪಡೆದರು. ಮೂರು ಕೋಟಿ ಕುಟುಂಬಗಳಿಗೆ ಮನೆ ನೀಡಲು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ವಿಸ್ತರಿಸಲು ನನ್ನ ಸರ್ಕಾರ ನಿರ್ಧರಿಸಿದೆ ಈ ಸರ್ಕಾರದ ಮೂರನೇ ಅವಧಿಯಲ್ಲಿ ಹಿಂದಿನ ಸರ್ಕಾರಗಳಿಗಿಂತಲೂ ಮೂರು ಪಟ್ಟು ಹೆಚ್ಚು ಕೆಲಸ ಮಾಡುತ್ತಿದೆ. 70 ವರ್ಷ ಮೇಲಿನ ಆರು ಕೋಟಿ ಜನರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ ಸೌಕರ್ಯ ನೀಡುವ ಬೃಹತ್ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ. ನೂತನ ಶಿಕ್ಷಣ ನೀತಿ ಮೂಲಕ ಯುವ ಸಮುದಾಯಕ್ಕೆ ಉತ್ತಮ ಶಿಕ್ಷಣ ನೀಡುವುದರಿಂದ ಅವರನ್ನು ಸಶಕ್ತರನ್ನಾಗಿಸಲಾಗುತ್ತಿದೆ ಎಂದರು.

Exit mobile version