ಕೇಂದ್ರ ಸರ್ಕಾರ ಯಾವುದೇ ಪಾಠ ಕಲಿತಿಲ್ಲ…

0
17

ನವದೆಹಲಿ: ಈ ಸರಕಾರ ಎಚ್ಚೆತ್ತುಕೊಳ್ಳುವ ಮುನ್ನ ಇನ್ನೂ ಎಷ್ಟು ಕುಟುಂಬಗಳು ನಾಶವಾಗಬೇಕು? ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಮೈಸೂರು-ದರ್ಭಾಂಗ ಬಾಗ್ಮತಿ ಎಕ್ಸ್‌ಪ್ರೆಸ್ ಅಪಘಾತ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕೇಂದ್ರ ಸರ್ಕಾರದ ವಿದುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಲವಾರು ರೈಲು ದುರಂತಗಳು ನಡೆದಿರುವುದು ಗೊತ್ತಿದ್ದರೂ ಕೇಂದ್ರ ಸರಕಾರ ರೈಲು ಅವಘಡ ತಪ್ಪಿಸಲು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ, ಮೈಸೂರು-ದರ್ಭಾಂಗ ರೈಲು ಅಪಘಾತವು ಭೀಕರವಾದ ಬಾಲಸೋರ್ ಅಪಘಾತವನ್ನು ಪ್ರತಿಬಿಂಬಿಸುತ್ತದೆ – ಪ್ಯಾಸೆಂಜರ್ ರೈಲು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಹಲವಾರು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ, ಯಾವುದೇ ಪಾಠಗಳನ್ನು ಕಲಿತಿಲ್ಲ. ಹೊಣೆಗಾರಿಕೆಯು ಮೇಲ್ಭಾಗದಲ್ಲಿ ಪ್ರಾರಂಭವಾಗುತ್ತದೆ. ಈ ಸರಕಾರ ಎಚ್ಚೆತ್ತುಕೊಳ್ಳುವ ಮುನ್ನ ಇನ್ನೂ ಎಷ್ಟು ಕುಟುಂಬಗಳು ನಾಶವಾಗಬೇಕು? ಎಂದಿದ್ದಾರೆ.

Previous articleಶಾಸಕರೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ…
Next articleಅಕ್ರಮವಾಗಿ ನೆಲೆಸಿದ್ದ 7 ಬಾಂಗ್ಲಾದೇಶೀಯರ ಬಂಧನ