ಕೇಜ್ರಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

0
20

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ .
ಜೂನ್‌.1, 2024ರ ವರೆಗೆ ಮಧ್ಯಂತರ ಜಾಮೀನು ದೊರೆತಿದ್ದು, ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಭಾಗಿಯಾಗಲು ಅವಕಾಶ ನೀಡಿದೆ. ಜೂನ್ 2 ರಂದು ಶರಣಾಗಲು ಹೇಳಿದೆ.
ಜೂನ್ 4 ರಂದು ಫಲಿತಾಂಶ ಪ್ರಕಟವಾಗುವವರೆಗೆ ಮಧ್ಯಂತರ ಜಾಮೀನು ನೀಡುವಂತೆ ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿ ಜೂನ್ 2ರಂದು ಶರಣಾಗಲು ಸೂಚನೆ ನೀಡಿದೆ.

ಕೇಜ್ರಿವಾಲ್‌ ಮಾರ್ಚ್‌ 21ರಂದು ಬಂಧಿತರಾಗಿದ್ದು, ತಿಹಾರ್‌ ಜೈಲಿನಲ್ಲಿದ್ದಾರೆ. ಜಾರಿ ನಿರ್ದೇನಾಲಯದ ಬಂಧನ ಪ್ರಶ್ನಿಸಿ ಕೇಜ್ರಿವಾಲ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸುತ್ತಿದ್ದು, ಇದರ ಭಾಗವಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

Previous articleದಾಭೋಲ್ಕರ್ ಹತ್ಯೆ ಪ್ರಕರಣ: ಹಂತಕರಿಗೆ ಜೀವಾವಧಿ ಶಿಕ್ಷೆ
Next articleಏತನೀರಾವರಿ ಯೋಜನೆಯಡಿ ಕಾಲುವೆ ಮೂಲಕ ಕೆರೆಗಳಿಗೆ ನೀರು