Home ತಾಜಾ ಸುದ್ದಿ ಕೇಜ್ರಿವಾಲ್ ಮನವಿಗೆ ಸುಪ್ರೀಂ ಕೋರ್ಟ್ ಇಡಿಗೆ ನೋಟಿಸ್

ಕೇಜ್ರಿವಾಲ್ ಮನವಿಗೆ ಸುಪ್ರೀಂ ಕೋರ್ಟ್ ಇಡಿಗೆ ನೋಟಿಸ್

0
72

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಂಧನವನ್ನು ರದ್ದುಗೊಳಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಮನವಿಯಲ್ಲಿ ಸುಪ್ರೀಂ ಕೋರ್ಟ್ ಸೋಮವಾರ ಜಾರಿ ನಿರ್ದೇಶನಾಲಯಕ್ಕೆ (ಇಡಿ) ನೋಟಿಸ್ ಜಾರಿ ಮಾಡಿದೆ.
ಅರ್ಜಿಯ ವಿಚಾರಣೆ ನಡೆಸಿ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್‌.ಏಪ್ರಿಲ್‌ 24ರೊಳಗೆ ಈ ಕುರಿತು ಇ.ಡಿ ಪ್ರತಿಕ್ರಿಯಿಸಬೇಕು ಎಂಬುದಾಗಿ ಸೂಚಿಸಿದ ನ್ಯಾಯಾಲಯವು ಏಪ್ರಿಲ್‌ 29ಕ್ಕೆ ವಿಚಾರಣೆ ಮುಂದೂಡಿದೆ. ಅಲ್ಲಿಯವರೆಗೆ ದೆಹಲಿ ಮುಖ್ಯಮಂತ್ರಿಯು ದೆಹಲಿಯ ತಿಹಾರ ಜೈಲಿನಲ್ಲಿ ಇಡಲಾಗುವುದು.