Home ನಮ್ಮ ಜಿಲ್ಲೆ ಕೇರಳಕ್ಕೆ ನಮ್ಮ ಸರ್ಕಾರ ಸಹಕಾರ ನೀಡಲಿದೆ

ಕೇರಳಕ್ಕೆ ನಮ್ಮ ಸರ್ಕಾರ ಸಹಕಾರ ನೀಡಲಿದೆ

0

ಬೆಂಗಳೂರು: ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳಕ್ಕೆ ನಮ್ಮ ಸರ್ಕಾರ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದಿದ್ದಾರೆ.

Exit mobile version