ಕೊಡಗು ಎಸ್​ಪಿ ಅಮಾನತು ಆಗಬೇಕು

0
22

ಬೆಂಗಳೂರು: ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು. ಕೊಡಗು ಎಸ್​ಪಿ ಅಮಾನತು ಆಗಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು, ಅದಕ್ಕಾಗಿ ಸೂಕ್ತ ತನಿಖೆ ಆಗಬೇಕು. ಕೊಡಗು ಎಸ್ಪಿ ಅಮಾನತು ಆಗಬೇಕು. ನಾಳೆ ನಮ್ಮ ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇವೆ. ತೆನ್ನೀರಾ, ಪೊನ್ನಣ್ಣ, ಮಂತರ್ ಗೌಡ ವಿರುದ್ಧ ದೂರು ನೀಡಿದ್ದೇವೆ, ಕೊಡಗಿನ ವಿನಯ್‌ ಅವರಿಗೆ 2-3 ತಿಂಗಳಿಂದ ಎಸ್​ಪಿ ಮೂಲಕ ಕಾಂಗ್ರೆಸ್ ಶಾಸಕರು, ತನ್ನಿರಾ ಮೈನಾ ಕಿರುಕುಳ ನೀಡಿದ್ದಾರೆ. ಶಾಸಕರು ಧಮ್ಕಿ ಹಾಕಿದ್ದನ್ನು ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್​ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ. ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು. ಕೊಡಗು ಎಸ್​ಪಿ ಅಮಾನತು ಆಗಬೇಕು ಎಂದರು.

Previous articleಮಹಾರಾಷ್ಟ್ರ ನವನಿರ್ಮಾಣ ಸೇನೆ  ಹೋರಾಟಕ್ಕೆ ಕರವೇ ಅಧ್ಯಕ್ಷರ  ಬೆಂಬಲ
Next articleಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್: ನ್ಯಾಯಾಂಗ ತನಿಖೆ ನಡೆಸಲು ಮಾನ್ಯ ಉಚ್ಚ ನ್ಯಾಯಾಲಯ ಆದೇಶ