ಕೊಡೆ ಹಿಡಿದು ಬಸ್‌ ಚಾಲನೆ ಮಾಡಿದ ಡ್ರೈವರ್‌

0
9

ಬೆಂಗಳೂರು: ಕೊಡೆ ಹಿಡಿದು ಡ್ರೈವಿಂಗ್ ಮಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ವಾಯವ್ಯ ಕರ್ನಾಟಕ ಸಾರಿಗೆ ಬಸ್ಸೊಂದರಲ್ಲಿ ಸೋರುತ್ತಿರುವ ಮಳೆನೀರಿನಿಂದ ರಕ್ಷಣೆ ಪಡೆಯಲು ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದುಕೊಂಡು ಬಸ್ ಚಲಾಯಿಸಿದ ಘಟನೆ ವರದಿಯಾಗಿದೆ. ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ. ಚಾಲಕ ಕೈಯಲ್ಲಿ ಕೊಡೆ ಹಿಡಿದುಕೊಂಡು ಅಪಾಯಕಾರಿ ಚಾಲನೆ ಮಾಡಿದ್ದಾರೆ. ಇದೆಂಥಾ ಅವ್ಯವಸ್ಥೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Previous articleಸೂರ್ಯಕಾಂತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಯಶ್‌
Next articleಪಾಕಿಸ್ತಾನ ಪರ ಪೋಸ್ಟ್: ಅಸ್ಗರ್ ಬಂಧನ