ಕೊಣಾಜೆಯ ಯುವಕ ವಿದೇಶದಲ್ಲಿ ಮೃತ್ಯು

0
18

ಮುಡಿಪು: ವಿದೇಶದಲ್ಲಿ ಕೆಲಸಕ್ಕಿದ್ದ ಕೊಣಾಜೆ ಗ್ರಾಮದ ನಡುಪದವಿನ ಯುವಕನೋರ್ವ ವಿದೇಶದಲ್ಲಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಮೃತಪಟ್ಟ ಯುವಕನನ್ನು ಉಮ್ಮರ್ ಎಂಬವರ ಪುತ್ರ ನೌಫಲ್(25) ಎಂದು ಗುರುತಿಸಲಾಗಿದೆ.
ದುಬಾಯಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಉದ್ಯೋಗದಲ್ಲಿದ್ದ ಇವರು ಬುಧವಾರದಂದು ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಊರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ನೌಫಲ್ ಅವರು ಕೊಣಾಜೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ನಝರ್ ಷಾ ಪಟ್ಟೋರಿ ಅವರ ಸಹೋದರನಾಗಿದ್ದಾರೆ.

Previous articleಅರಣ್ಯ ಭೂಮಿ ಮಾರಾಟ, ದಾನ ಮಾಡಲು ಯಾರಿಗೂ ಅವಕಾಶವಿಲ್ಲ
Next articleಇಲ್ಯಾಸ್‌ ಕೊಲೆ ಪ್ರಕರಣ: ನಾಲ್ವರು ವಶಕ್ಕೆ