ಕೊಪ್ಪಳ: ಬಲ್ಡೋಟಾ ಕಾರ್ಖಾನೆ ರಾಜ್ಯ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದೆ, ಇದು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ್ದಲ್ಲ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಬಿಎಸ್ಪಿಎಲ್ ಕಾರ್ಖಾನೆ ಆರಂಭದಿಂದ ಪರಿಸರ ಹಾನಿಯಾಗುತ್ತಿದೆ ಎಂಬ ಜನರ ಆರೋಪ ಇದೆ, ರಾಜ್ಯ ಸರ್ಕಾರ ಮತ್ತು ಕಾರ್ಖಾನೆ ನಡುವೆ ಒಪ್ಪಂದ ಆಗಿದೆ. ಈ ಬಗ್ಗೆ ಕೇಂದ್ರದ ಮುಂದೆ ಯಾವುದೇ ಪ್ರಸ್ತಾಪ ಬಂದಿಲ್ಲ. ಆದರೆ, ರಾಜ್ಯ ಸರ್ಕಾರ ಯಾವಾಗಲೂ ಜನರ ಪರವಾಗಿ ಇರಬೇಕು, ಇದು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ್ದಲ್ಲ. ಬಲ್ಡೋಟಾ ಕಾರ್ಖಾನೆ ರಾಜ್ಯ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದೆ. ಕೇಂದ್ರ ಸರ್ಕಾರದ ಮುಂದೆ ಈ ಪ್ರಸ್ತಾವನೆ ಬಂದಿಲ್ಲ, ನಾನು ಈಗಾಗಲೇ ರಾಜ್ಯ ಸರ್ಕಾರಕ್ಕೆ ಜನರಿಗೆ ತೊಂದರೆಯಾಗುವ ಯೋಜನೆ ಬೇಡ ಎಂದಿದ್ದೇನೆ ಎಂದರು.