ಕೊರೋನಾ ಸೋಂಕಿಗೆ ಬೆಳಗಾವಿಯಲ್ಲಿ ಮೊದಲ ಬಲಿ

0
50

ಬೆಳಗಾವಿ: ನಗರದ ತಾಲೂಕಿನ 70 ವರ್ಷದ ರೋಗಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದೆ.
ರೋಗಿಯು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಪತ್ತೆಯಾಗಿತ್ತು. ಬಳಿಕ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ರೋಗಿಗೆ ಬುಧವಾರವಷ್ಟೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಪಾಸಿಟಿವ್ ಅಂತಾ ಗೊತ್ತಾದ ತಕ್ಷಣವೇ ರೋಗಿಯನ್ನು ಕೋವಿಡ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು. ಇವರು ವಯೋಸಹಜ ಕಾಯಿಲೆಯಿಂದಲೂ ಬಳಲುತ್ತಿದ್ದರು. ತಡರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ರೋಗಿಯ ಕುಟುಂಬಸ್ಥರು ಕೋವಿಡ್ ನಿಯಮಾವಳಿಯ ಪ್ರಕಾರ ರಾತ್ರಿಯೇ ಅಂತ್ಯಸಂಸ್ಕಾರ ಮಾಡಿದ್ದಾರೆ. ಇದೀಗ ರಾಜ್ಯದಲ್ಲಿ ಕೋವಿಡ್ ವೈರಸ್‌ನಿಂದ ಇಬ್ಬರು ಮೃತಪಟ್ಟಿದ್ದಾರೆ.

Previous articleದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡಲು ಕಾಂಗ್ರೆಸ್ ಸರ್ಕಾರ ನೇರ ಕಾರಣ
Next articleನನ್ನ DOGE ಅವಧಿ ಕೊನೆಯಾಗಿದೆ ಎಂದ ಮಸ್ಕ್