ಕೊಲೆ ರಹಸ್ಯ ಬಾಯ್ಬಿಟ್ಟ ಫಯಾಜ್

0
12

ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಕೊಲೆಯ ಆರೋಪಿ ಫಯಾಜ್​ನನ್ನು ಪೊಲೀಸರು ಬಂಧಿಸಿ, ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದು ಕಾರಾಗೃಹದ ಸಿಬ್ಬಂದಿ ಎದುರು ಫಯಾಜ್‌ ಕೊಲೆಯ ಕಾರಣವನ್ನು ಬಾಯಿಟ್ಟಿದ್ದಾನೆ.
ʼನೇಹಾ ನನ್ನ ಜೊತೆ ಮಾತನಾಡಲ್ಲ ಅಂದಳು, ಅದಕ್ಕೆ ನಾನು ಚಾಕು ಹಾಕಿದೆʼ ಎಂದು ಹೇಳಿದ್ದಾನೆ. ಅಲ್ಲದೆ ಒಂದು ವಾರದ ಹಿಂದೆ ಕಾಲೇಜ್​ಗೆ ಹೋಗಿ ನೇಹಾಳನ್ನು ಮಾತನಾಡಿಸಲು ಯತ್ನಿಸಿದೆ. ಆದರೆ ಅವಳು ನಿನ್ನ ಜೊತೆ ಮಾತನಾಡಲು ಇಷ್ಟ ಇಲ್ಲ ಎಂದು ನನ್ನನ್ನು ಅವೈಡ್ ಮಾಡಿ, ಹೋದಳು”.
“ಏಪ್ರಿಲ್​ 18ರಂದು ಅವಳು ಪರೀಕ್ಷೆ ಬರೆಯಲು ಬಿವಿಬಿ ಕಾಲೇಜಿಗೆ ಬರುತ್ತಾಳೆ ಎಂದು ನಾನು ಮತ್ತೆ ಅಂದು ಕಾಲೇಜಿಗೆ ಬಂದಿದ್ದೆ. ಪರೀಕ್ಷೆ ಮುಗಿಯುವವರೆಗೂ ಕಾಯ್ದು ಪರೀಕ್ಷೆ ಮುಗಿದ ಬಳಿಕ ಹೊರಗೆ ಬಂದ ಅವಳನ್ನು ಮಾತನಾಡಿಸಲು ಯತ್ನಿಸಿದೆ. ಆದರೆ ಅವಳು ಮತ್ತೆ ಮಾತಾಡಲ್ಲ ಅಂದಳು. ಹೀಗಾಗಿ ಅವಳಿಗೆ ಚಾಕುವಿನಿಂದ ಚುಚ್ಚಿದೆ. ಅವಳಿಗೆ ಚಾಕು ಹಾಕುವ ವೇಳೆ ನನ್ನ ಎರಡು ಕೈ ಬೆರಳುಗಳಿಗೆ, ಕಾಲಿಗೂ ಗಾಯವಾಗಿದೆ. ಏನಾಗಿದೆ ಅನ್ನೋದು ಗೊತ್ತಿಲ್ಲ, ಅವಳು ಮಾತಾಡಲ್ಲ ಅಂದಳು ಅದಕ್ಕೆ ನಾನು ಚಾಕು ಹಾಕಿದ್ದೇನೆ” ಎಂದು ಕಾರಾಗೃಹ ಸಿಬ್ಬಂದಿ ಎದುರು ಫಯಾಜ್​ ಹೇಳಿದ್ದಾನೆ.

Previous articleಮೋದಿ ದೇಶಕ್ಕೆ ಹಿಡಿದಿರುವ ಶನಿ
Next articleಯತ್ನಾಳ ಯುನಿವರ್ಸಲ್ ಗುರು