ಕೊಲ್ಕತ್ತಾ: ಹೋಟೆಲ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಹದಿನೈದು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
“ರಿತುರಾಜ್ ಹೋಟೆಲ್ ಆವರಣದಲ್ಲಿ ಮಂಗಳವಾರ ರಾತ್ರಿ ದುರಂತ ಸಂಭವಿಸಿದೆ. ಇದುವರೆಗೆ 14 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ತಂಡಗಳು ಹಲವು ಮಂದಿಯನ್ನು ರಕ್ಷಿಸಿವೆ ಎಂದು ಕೊಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ತಿಳಿಸಿದ್ದಾರೆ. ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತ ಪಡಿಸಿದ್ದು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ಎಂದು ಪ್ರಧಾನಿ ಕಚೇರಿ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ. ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.