ಕೋವಿಡ್ ಅಕ್ರಮ ತನಿಖೆಗೆ ಎಸ್​​ಐಟಿ ರಚನೆ

0
8

ಬೆಂಗಳೂರು: ಕೋವಿಡ್ ಅಕ್ರಮ ತನಿಖೆಗೆ ಎಸ್​​ಐಟಿ ವಿಶೇಷ ತಂಡ ರಚನೆ ಜೊತೆಗೆ ಕ್ಯಾಬಿನೆಟ್ ಸಬ್ ಕಮಿಟಿ ರಚನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ಮಾಡಲಾಗಿದ್ದು. ಸಭೆಯಲ್ಲಿ ಹಲವು ವಿಷಯಗಳನ್ನು ಚರ್ಚೆ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಕೋವಿಡ್-19 ವೈದ್ಯಕೀಯ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ಅವರ ವಿಚಾರಣಾ ಆಯೋಗವು ಆಗಸ್ಟ್ 31, 2024ರಂದು ಸಲ್ಲಿಸಿರುವ ಭಾಗಶ: ವರದಿಯ ಮೇಲೆ ಕೈಗೊಳ್ಳಬೇಕಾಗುವ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. ಆಯೋಗ 11 ಸಂಪುಟಗಳನ್ನು ಸಲ್ಲಿಸಿದೆ. 7223. 64 ಕೋಟಿ ಮೊತ್ತದ ಅವ್ಯವಹಾರದ ತನಿಖೆ ನಡೆದಿದೆ. 500 ಕೋಟಿ ರೂ. ವಸೂಲಾತಿಗೆ ಆಯೋಗ ಶಿಫಾರಸು ಮಾಡಿದೆ. ಬಿಬಿಎಂಪಿ ನಾಲ್ಕು ವಲಯ ಹಾಗೂ ರಾಜ್ಯದ 31 ಜಿಲ್ಲೆಗಳಿ‌ಂದ ಇನ್ನೂ ವರದಿ ಬರಬೇಕಿದೆ. 55 ಸಾವಿರ ಕಡತಗಳನ್ನು ಪರಿಶೀಲಿಸಿದ್ದಾರೆ. ಕ್ರಿಮಿನಲ್ ಹಿನ್ನೆಲೆ ಇರುವ ಕಾರಣ ಎಸ್​​ಐಟಿ ರಚನೆಗೆ ಹಾಗೂ ಕ್ಯಾಬಿನೆಟ್ ಸಬ್ ಕಮಿಟಿ ರಚನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Previous articleಮೂವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ
Next articleಸರ್ಕಾರ ಹಗರಣ ಮುಚ್ಚಿಹಾಕಲು SIT ತನಿಖೆ ನೇಮಿಸುತ್ತಿದೆ