ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯದಲ್ಲಿ ಕೋವಿಡ್ – 19 ಪರಿಸ್ಥಿತಿ ಕುರಿತಂತೆ ಉನ್ನತಮಟ್ಟದ ಸಭೆ ನಡೆಸಿ, ಚರ್ಚಿಸಿದರು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ತಾಂತ್ರಿಕ ಸಮಿತಿ ಸದಸ್ಯರೊಂದಿಗೆ ಮುಖ್ಯಮಂತ್ರಿಗಳು, ಡಿಸಿಎಂ ಡಿ. ಕೆ. ಶಿವಕುಮಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡುರಾವ, ಗೃಹ ಸಚಿವ ಡಾ. ಪರಮೇಶ್ವರ, ವೈದ್ಯಕೀಯ ಶಿಕ್ಷಣ ಸಚಿವ ಡಾ|| ಶರಣಪ್ರಕಾಶ ಪಾಟೀಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.