ಬೆಂಗಳೂರು: ಕೋವಿಡ್ ವೇಳೆ ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರದ ಕುರಿತು ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ಆಯೋಗದ ಮಧ್ಯಂತರ ವರದಿ ಮಾಹಿತಿ ಆಧಾರವಾಗಿಸಿಕೊಂಡು ಮುಂದಿನ ತನಿಖೆಗೆ ಎಸ್ಐಟಿ ರಚನೆಗೆ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಈ ಸಂಬಂಧ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಮಧ್ಯಂತರ ವರದಿ ಪರಿಶೀಲಿಸಿ ರಾಜ್ಯ ಸರ್ಕಾರ ಎಸ್ಐಟಿ ರಚಿಸಲು ತೀರ್ಮಾನಿಸಿದೆ. ವರದಿಯಲ್ಲಿನ ಆಧಾರಗಳು, ವಿಷಯ, ಮಾಹಿತಿಯನ್ನು ಆಧಾರವಾಗಿಸಿ ಮುಂದಿನ ತನಿಖೆ ಹಾಗೂ ಕ್ರಮಕ್ಕಾಗಿ ಎಸ್ಐಟಿ ರಚಿನೆ ಮಾಡಲು ಸಚಿವ ಸಂಪುಟ ತೀರ್ಮಾನಿಸಿದೆ, ಐಜಿ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಲಾಗುತ್ತದೆ. ಆಯೋಗದ ಮಾಹಿತಿ ಆಧಾರದಲ್ಲಿ ತನಿಖೆ ಮಾಡಲಾಗುವುದು. ಎಸ್ಐಟಿ ಆರ್ಥಿಕ ಅಂಶಗಳು ಸೇರಿದಂತೆ ಅಪರಾಧ ಪ್ರಕರಣಗಳನ್ನು ದಾಖಲಿಸಿ ಕ್ರಮ ತೆಗದುಕೊಳ್ಳಲಿದೆ. ಅಗತ್ಯಬಿದ್ದರೆ ವರದಿಯ ಮಾಹಿತಿ ಹೊರತಾಗಿ ಮತ್ತೆ ತನಿಖೆ ಮಾಡಿ, ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.