Home ತಾಜಾ ಸುದ್ದಿ ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ನಿಧನ

ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ನಿಧನ

0

ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ವ್ಯಾಟಿಕನ್ ನಗರದಲ್ಲಿ ನಿಧನರಾಗಿದ್ದಾರೆ.
ಕಳೆದ ವಾರ ಸೇಂಟ್ ಪೀಟರ್ಸ್ ಚೌಕ್​​ನಲ್ಲಿ ಕ್ಯಾಥೋಲಿಕ್ ಚರ್ಚ್‌ನ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನಾರೋಗ್ಯದ ಕಾರಣ ಪೋಪ್ ಫ್ರಾನ್ಸಿಸ್ ಅವರಿಗೆ ಸಾಧ್ಯವಾಗಿರಲಿಲ್ಲ.ನಿಗದಿಯಾಗಿದ್ದ ಅನೇಕ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿತ್ತು. ಪೋಪ್‌ಗೆ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. ಅವರ ಸ್ಥಿತಿ ‘ಸ್ಥಿರ’ ಎಂದು ಈ ಹಿಂದೆ ವೈದ್ಯರು ತಿಳಿಸಿದ್ದರು. ಆದರೆ, ಪೋಪ್ ಸ್ಥಿತಿ ಗಂಭೀರವಾಗಿದೆ ಎಂದು ಶನಿವಾರ ಸಂಜೆ ವ್ಯಾಟಿಕನ್ ಪ್ರಕಟಣೆ ತಿಳಿಸಿತ್ತು. ಫ್ರಾನ್ಸಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು. ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ. ಅವರ ನಿಧನದ ಸುದ್ದಿ ಪ್ರಪಂಚದಾದ್ಯಂತ ಕೋಟ್ಯಂತರ ಕ್ಯಾಥೋಲಿಕರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಪೋಪ್ ಫ್ರಾನ್ಸಿಸ್ ಆರೋಗ್ಯ ಕಳೆದೊಂದು ವಾರದಿಂದ ತೀವ್ರವಾಗಿ ಹದಗೆಟ್ಟಿತ್ತು.

Exit mobile version