Home ನಮ್ಮ ಜಿಲ್ಲೆ ಚಿಕ್ಕಮಗಳೂರು ಖಾರದ ಪುಡಿ ಎರಚಿ ಸುಲಿಗೆ: ಓರ್ವನ ಬಂಧನ

ಖಾರದ ಪುಡಿ ಎರಚಿ ಸುಲಿಗೆ: ಓರ್ವನ ಬಂಧನ

0
ಐವರ ಬಂಧನ

ಚಿಕ್ಕಮಗಳೂರು: ನಾಲ್ವರು ಅಪರಿಚಿತ ಯುವಕ ತಂಡವೊಂದು ಮನೆ ಮಾಲಿಕನಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಲಾಂಗ್ ಇಟ್ಟು ಮನೆಯಲ್ಲಿದ್ದ ಸುಮಾರು 5 ಲಕ್ಷ ನಗದು, 30 ಗ್ರಾಂ ಮಾಂಗಲ್ಯ ಸರವನ್ನ ಹೊತ್ತೊಯ್ದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಳಿಗನಾಡು ಹೆಬ್ಬಾರಟ್ಟಿ ಗ್ರಾಮದಲ್ಲಿ ನಡೆದಿದೆ.

ಹೆಬ್ಬಾರಟ್ಟಿ ಅನಂತ ಹೆಬ್ಬಾರ್ ಎಂಬುವರ ಮನೆಯಲ್ಲಿ ದರೋಡೆ ನಡೆದಿದ್ದು ನಾಲ್ವರು ಅಪರಿಚಿತ ಯುವಕರ ತಂಡ ಮನೆಯ ಮೇಲೆ ದಾಳಿ ನಡೆಸಿ ಮನೆ ಮಾಲೀಕನ ಕುತ್ತಿಗೆಗೆ ಹರಿತವಾದ ಲಾಂಗ್ ಇಟ್ಟು ಬೆದರಿಸಿ ಮನೆಯಲ್ಲಿದ್ದ ಸುಮಾರು ಐದು ಲಕ್ಷ ನಗದು ಸೇರಿದಂತೆ ಚಿನ್ನಾಭರಣಗಳನ್ನು ದರೋಡೆ ಮಾಡಿದ್ದಾರೆ.

ಈ ವೇಳೆ ತಡೆಯಲು ಬಂದ ಕಾರ್ಮಿಕ ಮಾಣಿ ಭಟ್ಟ ಎಂಬವರ ಕೈಗೆ ಹರಿತವಾದ ಆಯುಧದಿಂದ ಗಂಭೀರ ಹಲ್ಲೆ ಮಾಡಿದ್ದು ಈ ವೇಳೆ ಕಾರ್ಮಿಕ ಬೊಬ್ಬೆ ಹೊಡೆದ ಪರಿಣಾಮ ಅಕ್ಕಪಕ್ಕದ ಜನ ಸೇರುತ್ತಿದ್ದಂತೆ ಮೂವರು ಕಾರಿನಲ್ಲಿ ಪರಾರಿಯಾಗಿದ್ದಾರೆ

ಓರ್ವ ಅರಮನೆ ತಲಗೂರು ಎಂಬ ಗ್ರಾಮದ ಅರಣ್ಯದಲ್ಲಿ ಅವಿತು ಕೂತಿದ್ದ ಎನ್ನಲಾಗಿದ್ದು ಸ್ಥಳೀಯರು ಸೇರಿ ಅರಣ್ಯ ಪ್ರದೇಶದಲ್ಲಿ ಹುಡುಕಾಡಿದಾಗ ಓರ್ವ ಪತ್ತೆಯಾಗಿದ್ದು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version