ಖಾಸಗಿ ಕಂಪನಿಗಳ ಲಾಭಿಗೆ ಸರ್ಕಾರ ಮಣಿದಿದೆಯಾ?

0
16

ಬೆಂಗಳೂರು: ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಬರದಂತೆ ಖಾಸಗಿ ಕಂಪನಿಗಳ ಲಾಭಿಗೆ ಸರ್ಕಾರ ಮಣಿದಿದೆಯಾ? ಎಂದು ವಿರೋಧ ಪಕ್ಷದ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಅತ್ಯಂತ ಬೇಡಿಕೆ ಇರುವ ರೆಡಿ ಮೇಡ್ ಇಡ್ಲಿ, ದೋಸೆ ಹಿಟ್ಟು, ವೇ ಪ್ರೋಟೀನ್ ಸೇರಿದಂತೆ ಅನೇಕ ಹೊಸ ಉತ್ಪನ್ನಗಳ ಮೂಲಕ ‘ನಂದಿನಿ’ ಬ್ರ್ಯಾಂಡ್ ನ ಮಾರುಕಟ್ಟೆ ವಿಸ್ತರಿಸಲು ಅತ್ಯಂತ ಉತ್ಸಾಹ ಮತ್ತು ಬದ್ಧತೆ ತೋರಿದ್ದ ದಕ್ಷ ಅಧಿಕಾರಿ ಕೆಎಂಎಫ್‌ ಎಂಡಿ ಶ್ರೀ ಎಂ.ಕೆ.ಜಗದೀಶ್ ಅವರನ್ನ ದಿಢೀರನೆ ವರ್ಗಾವಣೆ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ನಿರ್ಧಾರ ಸಾರ್ವಜನಿಕರಲ್ಲಿ ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ನಿರ್ಧಾರದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡವಿದೆಯಾ? ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ಪರಿಚಯಿಸಲು ಹೊರಟಿದ್ದ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಬರದಂತೆ ಖಾಸಗಿ ಕಂಪನಿಗಳ ಲಾಭಿಗೆ ಸರ್ಕಾರ ಮಣಿದಿದೆಯಾ? ಈ ಅನುಮಾನಗಳ ಕುರಿತಂತೆ ಮತ್ತು ನಂದಿನಿ ಬ್ರ್ಯಾಂಡ್‌ನ ನೂತನ ಉತ್ಪನ್ನಗಳನ್ನು ಮಾರುಕಟ್ಟೆಗೆ ತರುವ ಯೋಜನೆಯಲ್ಲಿ ಏನಾದರೂ ಬದಲಾವಣೆ ಇದೆಯೇ ಎನ್ನುವ ಕುರಿತಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

Previous articleಬಾಂಗ್ಲಾ ಹಿಂದುಗಳ ದೌರ್ಜನ್ಯ ಖಂಡಿಸಿ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ
Next articleಆಹಾರ ಸಚಿವ ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ