Home ತಾಜಾ ಸುದ್ದಿ ಖಾಸಗಿ ಕಂಪನಿಗಳ ಲಾಭಿಗೆ ಸರ್ಕಾರ ಮಣಿದಿದೆಯಾ?

ಖಾಸಗಿ ಕಂಪನಿಗಳ ಲಾಭಿಗೆ ಸರ್ಕಾರ ಮಣಿದಿದೆಯಾ?

0

ಬೆಂಗಳೂರು: ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಬರದಂತೆ ಖಾಸಗಿ ಕಂಪನಿಗಳ ಲಾಭಿಗೆ ಸರ್ಕಾರ ಮಣಿದಿದೆಯಾ? ಎಂದು ವಿರೋಧ ಪಕ್ಷದ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಅತ್ಯಂತ ಬೇಡಿಕೆ ಇರುವ ರೆಡಿ ಮೇಡ್ ಇಡ್ಲಿ, ದೋಸೆ ಹಿಟ್ಟು, ವೇ ಪ್ರೋಟೀನ್ ಸೇರಿದಂತೆ ಅನೇಕ ಹೊಸ ಉತ್ಪನ್ನಗಳ ಮೂಲಕ ‘ನಂದಿನಿ’ ಬ್ರ್ಯಾಂಡ್ ನ ಮಾರುಕಟ್ಟೆ ವಿಸ್ತರಿಸಲು ಅತ್ಯಂತ ಉತ್ಸಾಹ ಮತ್ತು ಬದ್ಧತೆ ತೋರಿದ್ದ ದಕ್ಷ ಅಧಿಕಾರಿ ಕೆಎಂಎಫ್‌ ಎಂಡಿ ಶ್ರೀ ಎಂ.ಕೆ.ಜಗದೀಶ್ ಅವರನ್ನ ದಿಢೀರನೆ ವರ್ಗಾವಣೆ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ನಿರ್ಧಾರ ಸಾರ್ವಜನಿಕರಲ್ಲಿ ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ನಿರ್ಧಾರದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡವಿದೆಯಾ? ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ಪರಿಚಯಿಸಲು ಹೊರಟಿದ್ದ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಬರದಂತೆ ಖಾಸಗಿ ಕಂಪನಿಗಳ ಲಾಭಿಗೆ ಸರ್ಕಾರ ಮಣಿದಿದೆಯಾ? ಈ ಅನುಮಾನಗಳ ಕುರಿತಂತೆ ಮತ್ತು ನಂದಿನಿ ಬ್ರ್ಯಾಂಡ್‌ನ ನೂತನ ಉತ್ಪನ್ನಗಳನ್ನು ಮಾರುಕಟ್ಟೆಗೆ ತರುವ ಯೋಜನೆಯಲ್ಲಿ ಏನಾದರೂ ಬದಲಾವಣೆ ಇದೆಯೇ ಎನ್ನುವ ಕುರಿತಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

Exit mobile version