Home ಅಪರಾಧ ಖಾಸಗಿ ಬಸ್ ಗೆ ಬೆಂಕಿ: ತಪ್ಪಿದ ಭಾರಿ ಅನಾಹುತ

ಖಾಸಗಿ ಬಸ್ ಗೆ ಬೆಂಕಿ: ತಪ್ಪಿದ ಭಾರಿ ಅನಾಹುತ

0

ವಿಜಯಪುರ : ಜನತಾ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್ ಸುಟ್ಟು ಕರಕಲಾಗರುವ ಘಟನೆ ವಿಜಯಪುರದ ಹೊರವಲಯದ ಹಿಟ್ನಳ್ಳಿ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನಿಂದ ವಿಜಯಪುರಕ್ಕೆ ಬರುತ್ತಿದ್ದ ಜನತಾ ಟ್ರಾವೆಲ್ಸ್ ನ ಬಸ್ ಟೈರ್ ಬ್ಲಾಸ್ಟ್ ಆಗಿದೆ. ಕೂಡಲೇ ಎಚ್ಚೆತ್ತುಕೊಂಡ ಬಸ್ ಚಾಲಕ ಹಾಗೂ ನಿರ್ವಾಹಕ ಬಸ್ ನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗಡೆ ಇಳಿಸಿದ್ದರಿಂದ ಭಾರಿ ಅಪಾಯದಿಂದ ಪ್ರಯಾಣಿಕರು ಸೇಫ್ ಆಗಿದ್ದಾರೆ. ಕ್ಷಣಾರ್ಧದಲ್ಲಿಯೇ ಬಸ್ ಗೆ ಬೆಂಕಿ ಆವರಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ.

ಬೆಂಕಿ ಆರ್ಭಟಕ್ಕೆ ಬಸ್ ನಲ್ಲಿದ್ದ ಪ್ರಯಾಣಿಕರ ಎಲ್ಲ ಲಗೇಜ್ ಸುಟ್ಟು ಹೋಗಿವೆ. ಬೆಲೆಬಾಳುವ ವಸ್ತು, ಒಡವೆಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸುವಷ್ಟರಲ್ಲಿ ಬಸ್ ಸುಟ್ಟು ಹೋಗಿದೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version