ಖಾಸಗಿ ಬಸ್‌ ಲಾರಿ ನಡುವೆ ಅಪಘಾತ: ಓರ್ವ ಸಾವು

0
9

ವಿಜಯನಗರ: ಖಾಸಗಿ ಬಸ್ ಮತ್ತು ಲಾರಿ ಢಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟ ಘಟನೆ ನಡೆದಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಜಂಬಯ್ಯನ ಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮುಂಜಾನೆ ಈ ಘಟನೆ ಸಂಭವಿಸಿದೆ. ರಾಯಚೂರು ಮೂಲದ ವ್ಯಕ್ತಿ ಮೃತಪಟ್ಟಿದ್ದು, ಅಪಘಾತದ ರಭಸಕ್ಕೆ ಮುಖದ ಭಾಗ ಪೂರ್ತಿ ನಜ್ಜುಗುಜ್ಜಆಗಿದೆ. ಸದ್ಯ ಮೃತನ ಹೆಸರು ಗುರುತು ಪತ್ತೆ ಆಗಿಲ್ಲ. ಖಾಸಗಿ ಬಸ್ ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಬರುತ್ತಿದ್ದರೆ, ಲಾರಿಯು ಹೊಸಪೇಟೆ ಕಡೆಯಿಂದ ಕೂಡ್ಲಿಗಿ ಕಡೆ ಹೊರಟಿತ್ತು. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Previous articleಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿಗೆ ಜಾಮೀನು
Next articleನಿದ್ರೆ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ