ಖಾಸಗಿ ಶಾಲೆಗಳಲ್ಲಿ ನಾಡಗೀತೆ ವಿವಾದ: ಪ್ರಿಂಟ್​ ಮಿಸ್ಟೇಕ್​ ಎಂದ ಸಚಿವ

0
21

ಬೆಂಗಳೂರು: ಒಂದು ಸಣ್ಣ ಪ್ರಿಂಟ್ ಮಿಸ್ಟೇಕ್​ ಆಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿಧಾನಸೌಧದಲ್ಲಿ ಹೇಳಿದ್ದಾರೆ.
ಖಾಸಗಿ ಶಾಲೆಗಳಿಗೆ ನಾಡಗೀತೆ ವಿನಾಯ್ತಿ ಆದೇಶ ವಿಚಾರ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು ಒಂದು ಸಣ್ಣ ಪ್ರಿಂಟ್ ಮಿಸ್ಟೇಕ್​ ಆಗಿದೆ ನಮ್ಮಗೆ ಎಲ್ಲಾ ಶಾಲೆಗಳು ಒಂದೆ. ಆದೇಶ ಮಾಡಬೇಕಾದರೆ ಸರ್ಕಾರಿ ಶಾಲೆ ಅನುದಾನಿತ‌ ಶಾಲೆ ಅಂತ ಪ್ರಿಂಟ್​​ ಮಿಸ್ಟೇಕ್​ ಆಗಿದೆ. ಅದು ಎಲ್ಲ ಶಾಲೆಗಳು ಅಂತ ತಿದ್ದುಪಡಿ ಮಾಡಿಸುತ್ತೇವೆ. ನಮ್ಮ ಸರ್ಕಾರಕ್ಕೆ ಕನ್ನಡ ಬಗ್ಗೆ ಕಾಳಜಿ ಇದೆ. ನಾವು ಬಹಳ ಸ್ಪಷ್ಟವಾಗಿ ಇದ್ದೇವೆ. ಆದೇಶ ಪ್ರತಿಯ ಸಾಧಕ-ಭಾದಕ ಹೇಳಬೇಕು. ಸಹಜವಾಗಿ ನೋಟ್ ಶೀಟ್ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ ಎಂದು ಹೇಳಿದರು.

ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು, ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.

Previous articleಧಾರವಾಡ: 24 ರಂದು “ಕರಿನೀರ ವೀರ” ಪ್ರದರ್ಶನ
Next articleಫಾಲಿ ನಾರಿಮನ್ ಅವರೊಂದಿಗೆ ಕಳೆದ ಕ್ಷಣಗಳ ಮೆಲುಕು ಹಾಕಿದ ಎಂ ಬಿ ಪಾಟೀಲ