Home ತಾಜಾ ಸುದ್ದಿ ಖುದ್ದು ಹಾಜರಿಯಿಂದ BSYಗೆ ವಿನಾಯ್ತಿ

ಖುದ್ದು ಹಾಜರಿಯಿಂದ BSYಗೆ ವಿನಾಯ್ತಿ

0

ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬದಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ.
ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಇಂದು ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಿದೆ, ಜುಲೈ 15 ರಂದು ಖುದ್ದಾಗಿ ಹಾಜರಾಗುವಂತೆ ಬಿಎಸ್‌ವೈಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಆದರೆ, ಖುದ್ದು ಹಾಜರಿಗೆ ಹೈಕೋರ್ಟ್ ವಿನಾಯಿತಿ ನೀಡಿ ಅರ್ಜಿ ವಿಚಾರಣೆಯನ್ನು ಜುಲೈ 26ಕ್ಕೆ ನಡೆಸಲು ಹೈಕೋರ್ಟ್ ದಿನಾಂಕ ನಿಗದಿಪಡಿಸಿದೆ.

Exit mobile version