ಖೋ ಖೋ ವಿಶ್ವಕಪ್ ವಿಜೇತರಿಗೆ ಸಿಎಂ ಸನ್ಮಾನ

0
36

ಇಬ್ಬರೂ ಕ್ರೀಡಾಪಟುಗಳಿಗೆ ಸನ್ಮಾನಿಸಿ ತಲಾ 5 ಲಕ್ಷ ರೂ. ಬಹುಮಾನ ಸಹ ಘೋಷಿಸಿದ್ದಾರೆ

ಬೆಂಗಳೂರು: 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದ ಭಾರತ ತಂಡದ ರಾಜ್ಯದ ಕ್ರಿಡಾಪಟುಳಿಗೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಧಾನಸೌಧದ ಕಚೇರಿಯಲ್ಲಿ ರಾಜ್ಯದ ಇಬ್ಬರೂ ಕ್ರೀಡಾಪಟುಗಳಿಗೆ ಸನ್ಮಾನಿಸಿ ತಲಾ 5 ಲಕ್ಷ ರೂ. ಬಹುಮಾನ ಸಹ ಘೋಷಿಸಿದ್ದಾರೆ, ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ ಮತ್ತು ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು. 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಲು ಪ್ರಮುಖ ಪಾತ್ರ ವಹಿಸಿದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರು ಜಿಲ್ಲೆಯ ಟಿ.ನರಸೀಪುರದ ಕುರಬೂರಿನ ಚೈತ್ರಾ ಅವರನ್ನು ಮುಖ್ಯಮಂತ್ರಿ ಸನ್ಮಾನಿಸಿ, ಇಬ್ಬರಿಗೂ ತಲಾ 5 ಲಕ್ಷ ರೂಪಾಯಿಯ ಬಹುಮಾನ ಘೋಷಿಸಿ, ಕ್ರೀಡಾ ಬದುಕು ಮತ್ತಷ್ಟು ಯಶಸ್ಸುಗಳಿಂದ ಕೂಡಿರಲಿ ಎಂದು ಶುಭ ಕೋರಿದ್ದಾರೆ.

Previous articleಮಹದಾಯಿ ವಿಚಾರಣೆ ಮುಂದೂಡಿಕೆ..
Next articleಸಿದ್ದರಾಮಯ್ಯ ಕಪ್-2025: ಪೋಸ್ಟರ್ ಬಿಡುಗಡೆ