ಬೆಂಗಳೂರು: ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಡಿವೈಎಸ್ಪಿ ಎಂ ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪ್ರಕರಣದಲ್ಲಿ ಕೆ.ಜೆ. ಜಾರ್ಜ್ ಅವರ ಪಾತ್ರ ಇಲ್ಲ ಎಂದು ಆದೇಶ ನೀಡಿದ್ದು, ಹೈಕೋರ್ಟ್ ಆದೇಶದ ವಿರುದ್ಧ ಎಂ.ಕೆ ಗಣಪತಿ ಅವರ ಸಹೋದರಿ ಸವಿತಾ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಎತ್ತಿ ಹಿಡಿದಿದೆ ಈ ಮೂಲಕ ಇಂಧನ ಸಚಿವ ಕೆಜೆ ಚಾರ್ಜ್ ಅವರಿಗೆ ನಿರಾಳವಾಗುಂತಾಗಿದೆ. ಪ್ರಕರಣದಲ್ಲಿ ಕೆಜೆ ಜಾರ್ಜ್ ಅವರ ಪಾತ್ರವಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದ್ದು, ಈ ಕುರಿತು ಸಿಬಿಐ ಸಿಐಡಿ ತನಿಖಾ ತಂಡಗಳು ಬಿ ರಿಪೋರ್ಟ್ ಸಲ್ಲಿಸಿದ್ದವು. ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ಹೇಳಿದ್ದವು.