Home ತಾಜಾ ಸುದ್ದಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಗಮನ ಸೆಳೆದ ಕರ್ನಾಟಕದ ಸ್ತಬ್ಧ ಚಿತ್ರ

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಗಮನ ಸೆಳೆದ ಕರ್ನಾಟಕದ ಸ್ತಬ್ಧ ಚಿತ್ರ

0

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ಲಕ್ಕುಂಡಿಯ ವೈಶಿಷ್ಟ್ಯಪೂರ್ಣ ಹಾಗೂ ಕಲಾತ್ಮಕ ದೇವಾಲಯಗಳ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಾಯಿತು.
ಈ ಬಾರಿಯ ಗಣರಾಜ್ಯೋತ್ಸವದ ಪರೇಡ್ 2025 ರಲ್ಲಿ ಸ್ತಬ್ಧ ಚಿತ್ರಗಳ ನಿರೂಪಣೆ “ಸ್ವರ್ಣಿಮ ಭಾರತ್ – ವಿರಾಸತ್ ಮತ್ತು ವಿಕಾಸ್ ”. ಇದರಲ್ಲಿ ಇಂದು ನಮ್ಮ ಉತ್ತರ ಕರ್ನಾಟಕದ ಗದಗ ಜಿಲ್ಲೆಯ ಐತಿಹಾಸಿಕ ಪಾರಂಪರಿಕ ಲಕ್ಕುಂಡಿಯ ಐತಿಹಾಸಿಕ ಬ್ರಹ್ಮಜಿನಾಲಯದ ಸ್ತಬ್ಧಚಿತ್ರ ಭಾಗಿಯಾಗಿದ್ದು ಹೆಮ್ಮೆಯ ವಿಷಯ. ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಪರೇಡ್‌ನಲ್ಲಿ ಪಾಲ್ಗೊಂಡ ‘ಬ್ರಹ್ಮ ಜಿನಾಲಯ ದೇವಾಲಯ’ ಸಮಸ್ತ ರಾಷ್ಟ್ರಕ್ಕೆ ಲಕ್ಕುಂಡಿಯ ಶಿಲ್ಪಕಲಾ ವೈಭವವನ್ನು ನೆನಪಿಸಿತು.ಲಕ್ಕುಂಡಿಯು ಅಹಿಂಸಾವಾದಿಯ ನೆಲೆಬೀಡು. ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಮೂಡಿಬಂದಿದೆ.

Exit mobile version