ಗದಗ: ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ ಆವರಣದಲ್ಲಿ ಸೋಮವಾರ ವೈದ್ಯಕೀಯ ಶಿಕ್ಷಣ ಇಲಾಖೆ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ನೂತನ ಕ್ಯಾಥಲ್ಯಾಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಹೃದ್ರೋಗ ಚಿಕಿತ್ಸಾ ಘಟಕದ ಉದ್ಘಾಟನೆಯನ್ನು ಕಾನೂನು ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಸಚಿವ ಡಾ.ಎಚ್.ಕೆ. ಪಾಟೀಲ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ೧೮೫ ಕೋಟಿ ಕಾಲೇಜು ಕಟ್ಟಡ ನಿರ್ಮಾಣ ಆಗಿದೆ. ಒಟ್ಟಾರೆ ೩೬೬ ಕೋಟಿ ಖರ್ಚು ಮಾಡಿದ್ದೇವೆ. ೧೦ ಕೋಟಿ ವೆಚ್ಚದಲ್ಲಿ ಕ್ಯಾಥ್ ಲ್ಯಾಬ್ ಮಾಡಿದ್ದು, ಬಡವರಿಗೆ ಹೆಚ್ಚು ಅನುಕೂಲ ಆಗಲಿ ಎಂದರು. ಗದಗನಲ್ಲಿ ಮಾನವ ಸಂಪನ್ಮೂಲ ಸಕಾಲಕ್ಕೆ ಸೇವೆ ಒದಗಿಸಲು ಮುಂದಾಗಬೇಕು. ಇಲ್ಲಿ ಬರುವವರಿಗೆ ಸಕಾಲದಲ್ಲಿ ಸೇವೆ ನೀಡಬೇಕು. ಬರುವರಿಗೆ ಗೌರವ, ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಸೇವೆ ದೊರೆಯಲಿ ಎಂದು ಹೇಳಿದರು.