Home ತಾಜಾ ಸುದ್ದಿ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌

ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌

0

ಮೈಸೂರು : ಸ್ಟೇರಿಂಗ್‌ ರಾಡ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ನಡೆದಿದೆ
ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕೆಸ್ತೂರು ಗೇಟ್ ಬಳಿ ಈ ಘಟನೆ ನಡೆದಿದ್ದು. ಪ್ರಯಾಣಿಕರು ಗಾಯಗೊಂಡಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕೆ.ಆರ್.ನಗರ ಮತ್ತು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಕೆ ಆರ್‌ ನಗರ ಡಿಪೋಗೆ ಸೇರಿದ ಬಸ್ ಕೇರಳಾಪುರದಿಂದ ಸಾಲಿಗ್ರಾಮ, ಚುಂಚನಕಟ್ಟೆ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಪ್ರಕರಣ ಕೆಆರ್‌ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Exit mobile version