ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ಮಹಿಳೆ ಬಂಧನ

0
10

ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತೆಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಉಪ್ಪಿನಂಗಡಿ ಕರ್ವೇಲು ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ ಯಾನೆ ಸಾಜಿದ (35) ಎಂದು ಗುರುತಿಸಲಾಗಿದೆ.
ಗರುಡ ಗ್ಯಾಂಗ್‌ ಸದಸ್ಯರಿಗೆ ಸಫಾರ ಆರ್ಥಿಕ ನೆರವು ಮತ್ತು ಆಶ್ರಯದ ವ್ಯವಸ್ಥೆ ಮಾಡಿದ್ದಳು. ಗ್ಯಾಂಗ್ ಸದಸ್ಯರಿಗೆ ಮೊಬೈಲ್‌ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪವೂ ಸಫಾರ ಯಾನೆ ಸಾಜಿದ ಮೇಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ. ಸದ್ಯ ಸಫಾರ ಯಾನೆ ಸಾಜಿದಳನ್ನು ಮಂಗಳೂರು ಕಾರಾಗೃಹದಲ್ಲಿ ಇರಿಸಲಾಗಿದೆ. ಶುಕ್ರವಾರ ಆಕೆಯನ್ನು ಕೋರ್ಟಿಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Previous articleವಾಲ್ಮೀಕಿ ಪ್ರಕರಣದಲ್ಲಿ ಮಂತ್ರಿಗಳು-ಶಾಸಕರು ಭಾಗಿಯಾಗಿದ್ದರೆ ಅದು ಖಂಡಿತ ಕಳಂಕ
Next articleಮೂರನೇ ಅವಧಿಗೆ ಕೆಎಂಎಫ್ ಅಧ್ಯಕ್ಷರಾಗಿ ಶಂಕರ ಮುಗದ ಆಯ್ಕೆ