ಗಲಾಟೆ ವೇಳೆ ಯುವಕ ಸಾವು: ವದಂತಿಗೆ ಕಿವಿಗೊಡದೇ ಶಾಂತಿ ಕಾಪಾಡಲು ಸಚಿವರ ಮನವಿ

0
19

ಮಂಗಳೂರು : ಮಂಗಳೂರಿನ ಹೊರವಲಯದ ಕುಡುಪು ಬಳಿ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಂತ್ಯಂತ ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಕ್ರಿಕೆಟ್ ಆಟ ಆಡುವ ವೇಳೆ ಆಟಗಾರರ ಗುಂಪು ಹಾಗೂ ಅನ್ಯ ಕೋಮಿನ ಯುವಕನ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದು, ಯುವಕನ ಮೇಲೆ ಹಲ್ಲೆಮಾಡಲಾಗಿದೆ. ಈ ರೀತಿಯ ಘಟನೆಗಳು ಕೋಮು ವೈಷಮ್ಯವನ್ನು ಬೀರುತ್ತವೆ. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ನಾನು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.ಈಗಾಗಲೇ ಪ್ರಕರಣ ಕುರಿತು ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸೂಕ್ತ ತನಿಖೆ ನಡೆಸಲಾಗುತ್ತಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಕೋಮುಸೌಹಾರ್ಧತೆ ಹಾಗೂ ಶಾಂತಿ ಕಾಪಾಡುವಂತೆ ನಾನು ಮನವಿ ಮಾಡುತ್ತೇನೆ ಎಂದಿದ್ದಾರೆ.

Previous articleದೇಶ ವಿರೋಧಿ ಪೋಸ್ಟ್‌ ಹಾಕಿದ್ದ ವೈದ್ಯೆ ವಿರುದ್ಧ ಎಫ್‌ಐಆರ್‌: ಕೆಲಸದಿಂದಲೇ ವಜಾ
Next articleದೇಶದ ಸೈನಿಕರ ಯಶಸ್ಸಿಗಾಗಿ ಪರಶುರಾಮನ ಕೊಡಲಿಯಿಟ್ಟು ಮಹಾಯಾಗ