ರಾಮರಾಜ್ಯ ಮತ್ತು ಗ್ರಾಮರಾಜ್ಯ ಮಹಾತ್ಮಾ ಗಾಂಧೀಜಿಯವರ ಕನಸು
ಬೆಳಗಾವಿ: ಏಕತೆ, ಸಮಾನತೆ ಕಾಪಾಡಿಕೊಂಡು ಗಾಂಧೀಜಿಯವರ ತತ್ವಾದರ್ಶಗಳನ್ನು ಪುನರ್ ಮನನ ಮಾಡಲು ಇದು ಸ್ಫೂರ್ತಿದಾಯಕವಾಗಿದೆ ಎಂದು ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದ್ದಾರೆ.
ಸುವರ್ಣ ವಿಧಾನಸೌಧದ ಅಂಗಳದಲ್ಲಿ ಪ್ರತಿಷ್ಠಾಪಿಸಿದ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣದ ವೇಳೆ ಮಾತನಾಡಿ ಇದೊಂದು ಐತಿಹಾಸಿಕ ಕಾರ್ಯಕ್ರಮ; ಇದು ಕೇವಲ ಪುತ್ಥಳಿ ಅನಾವರಣ ಕಾರ್ಯಕ್ರಮ ಮಾತ್ರವಲ್ಲ. ಸ್ವಾತಂತ್ರ್ಯ ಯೋಧರಿಗೆ ಗೌರವಿಸುವ ಮತ್ತು ಸಂವಿಧಾನದ ಘನತೆ ಎತ್ತಿ ಹಿಡಿಯುವ ಪವಿತ್ರ ಕಾರ್ಯಕ್ರಮವಾಗಿದೆ, ಏಕೀಕರಣ ಕೂಡ ಗಾಂಧಿಜಿಯವರ ಪ್ರೇರಣೆ ದೊರೆತಿದೆ. ಏಕತೆ, ಸಮಾನತೆಕಾಪಾಡಿಕೊಂಡು ಗಾಂಧೀಜಿಯವರ ತತ್ವಾದರ್ಶಗಳನ್ನು ಪುನರ್ ಮನನ ಮಾಡಲು ಇದು ಸ್ಫೂರ್ತಿದಾಯಕವಾಗಿದೆ. ಗಾಂಧೀಜಿಯವರ ತತ್ವಗಳನ್ನು ಬದಿಗಿಟ್ಟು ಸದೃಢ ಭಾರತ ನಿರ್ಮಾಣ ಅಸಾಧ್ಯ. ಆದ್ದರಿಂದ ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಎಲ್ಲರೂ ಒಗ್ಗೂಡಿಕೊಂಡು ಮುನ್ನಡೆಯಬೇಕಿದೆ. ರಾಮರಾಜ್ಯ ಮತ್ತು ಗ್ರಾಮರಾಜ್ಯ ಮಹಾತ್ಮಾ ಗಾಂಧೀಜಿಯವರ ಕನಸಾಗಿತ್ತು. ಪರಸ್ಪರ ಸಹೋದರತೆ, ತ್ಯಾಗ, ಪತ್ನಿಯ ತ್ಯಾಗವು ರಾಮರಾಜ್ಯದ ನೈಜ ಪರಿಕಲ್ಪನೆಯಾಗಿದೆ ಎಂದರು.