Home ತಾಜಾ ಸುದ್ದಿ ಗಾಲಿ ಜನಾರ್ದನ ರೆಡ್ಡಿ ಶಾಸಕತ್ವ ರದ್ದು

ಗಾಲಿ ಜನಾರ್ದನ ರೆಡ್ಡಿ ಶಾಸಕತ್ವ ರದ್ದು

0

ಬೆಂಗಳೂರು: ಓಬಳಾಪುರ ಮೈನಿಂಗ್ ಪ್ರಕರಣದಲ್ಲಿ 7 ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿರುವ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ್ ರೆಡ್ಡಿ ಅವರ ಶಾಸಕತ್ವ ರದ್ದುಗೊಂಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಕಟಿಸಿ ಹೈದರ ಬಾದ್‌ನ ಚಂಚಲಗುಡ ಜೈಲಿಗೆ ರೆಡ್ಡಿ ಅವರನ್ನು ಸ್ಥಳಾಂತರ ಮಾಡಲಾಗಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕಾಯ್ದೆ 1951ರ ಸೆಕ್ಷನ್ 8 ಹಾಗೂ ಸಂವಿಧಾನದ ಪರಿಚ್ಚೇದ 191(1) ಪ್ರಕಾರ ಜನಾರ್ದನ ರೆಡ್ಡಿ ಅವರ ಶಾಸಕತ್ವವನ್ನು ರದ್ದುಗೊಳಿಸಲಾಗಿದೆ.

Exit mobile version