ಕಾರವಾರ: ಗುಂಡು ಹಾರಿಸಿಕೊಂಡು ಯೋಧನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಕೈಗಾದಲ್ಲಿ ಸೋಮವಾರ ನಡೆದಿದೆ.
ಬಿಹಾರ ಮೂಲದ ಸಿಎಸ್‌ಎಫ್ ಯೋಧ ಹರವಿಂದರ್ ಕುಮಾರ್ ರಾಮ(೨೮) ಆತ್ಮಹತ್ಯೆ ಮಾಡಿಕೊಂಡ ಯೋಧ. ಕೈಗಾದಲ್ಲಿ ಕಳೆದ ಎರಡು ವರ್ಷದಿಂದ ಕರ್ತವ್ಯ ನಿಭಾಯಿಸುತ್ತಿದ್ದ ಯೋಧ ಸದ್ಯ ಕ್ವಿಕ್ ರೆಸ್ಪಾನ್ಸ್ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದ. ಸಂಜೆ ಕರ್ತವ್ಯ ಮುಗಿಸಿ ವಾಹನದಲ್ಲಿ ಬರುವಾಗ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇನ್ನು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಮಲ್ಲಾಪುರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದು ಪ್ರಕರಣ ದಾಖಲಿಸಿದ್ದಾರೆ.