ಗುಜರಾತ್ ಗೇಮ್ ದುರಂತ ಪ್ರಕರಣ: ಎಲ್ಲರಿಗೂ ಎಚ್ಚರಿಕೆಯ ಗಂಟೆ

0
7

ಬೆಂಗಳೂರು: ಗುಜರಾತ್​ನ ಗೇಮಿಂಗ್ ಝೋನ್​ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಎಚ್ಚೆತ್ತಿದ್ದು, ಬೆಂಗಳೂರಿನ ಮಾಲ್ ಮತ್ತು ಗೇಮಿಂಗ್ ಝೋನ್​​ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್​ ಖಡಕ್​ ‌ಸೂಚನೆ ನೀಡಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವ ಅವರು ಗುಜರಾತ್‌ನ ರಾಜ್ ಕೋಟ್‌ ಮನರಂಜನಾ ಕೇಂದ್ರದಲ್ಲಿ (ಗೇಮ್ ರೋನ್) ಶನಿವಾರ ಸಂಜೆ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿರುವುದು ವರದಿಯಾಗಿದ್ದು, ಇದು ಅತ್ಯಂತ ಕಳವಳಿಕಾರಿ ದುರ್ಘಟನೆಯಾಗಿರುತ್ತದೆ. ಈ ದುರಂತವು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದ್ದು, ಬೆಂಗಳೂರಿನ ಹಲವು ಪ್ರತಿಷ್ಠಿತ ಮಾಲ್‌ಗಳಲ್ಲಿ ಮತ್ತು ಇತರೆ ಸ್ಥಳಗಳಲ್ಲಿ ಗೇಮ್ ಝೇನ್ ಹಾಗೂ ಸಾಹಸ ಕ್ರೀಡೆಗಳನ್ನು ನಡೆಸಲು ಅನುಮತಿ ನೀಡಲಾಗಿದ್ದು, ಇಂತಹ ಮನರಂಜನಾ ಕೇಂದ್ರಗಳು / ಗೇಮ್ ಜೋನ್‌ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕಿರುತ್ತದೆ. ಮಜನರಂಜನಾ ಕೇಂದ್ರ/ ಗೇಮಿಂಗ್ ರೋನ್‌ಗಳಿರುವ ಪ್ರದೇಶದಲ್ಲಿ ಅಗ್ನಿದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಂಡು, ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂದು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಲು ಮತ್ತು ಈಗಾಗಲೇ ವಿಧಿಸಲಾಗಿರುವ ರಕ್ಷಣಾ ನಿಯಮ ಮತ್ತು ನಿಬರ್ಂಧಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಲು ತಿಳಿಸುತ್ತಾ, ಯಾವುದೇ ದುರ್ಘಟನೆಗಳು ಸಂಭವಿಸದಂತೆ ಕ್ರಮವಹಿಸಲು ಸೂಚಿಸಿದ್ದಾರೆ.

Previous articleಆಟವಾಡುತ್ತ ನೀರಿನ ಟ್ಯಾಂಕ್‌ಗೆ ಬಿದ್ದು 2 ವರ್ಷದ ಮಗು ದುರ್ಮರಣ
Next articleಕಳಪೆ ಔಷಧ ಪೂರೈಸಿ ಜನರ ಆರೋಗ್ಯದ ಜತೆ ಚೆಲ್ಲಾಟ