ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಡಿಸೆಂಬರ್ 12 ರಂದು ಪ್ರಮಾಣ ವಚನ ಸ್ವೀಕಾರ

0
16
bhupendra-patel1

ಗಾಂಧಿನಗರ: ತೀವ್ರ ಗಮನ ಸೆಳೆದಿದ್ದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಡಿಸೆಂಬರ್ 12 ರಂದು ನೂತನ ಮುಖ್ಯಮಂತ್ರಿಯ ಪದಗ್ರಹಣ ಸಮಾರಂಭ ನಡೆಯುವುದಾಗಿ ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಘೋಷಿಸಿದ್ದಾರೆ.
ಸೋಮವಾರ ಮಧ್ಯಾಹ್ನ 12 ರಿಂದ 2 ಗಂಟೆಯವರೆಗೂ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದು, ಭೂಪೇಂದ್ರ ಪಟೇಲ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಾಟೀಲ್ ತಿಳಿಸಿದ್ದಾರೆ. ಗುಜರಾತ್ ನಲ್ಲಿ ಏಳನೇ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯುತ್ತಿದ್ದು, ಭೂಪೇಂದ್ರ ಪಟೇಲ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸಿ.ಆರ್. ಪಾಟೀಲ್ ಸುದ್ದಿಗೋಷ್ಛಿಯಲ್ಲಿ ತಿಳಿಸಿದರು.

Previous articleಪುಸ್ತಕಕ್ಕೆ ವಿಧಿಸಿದ್ದ ನಿರ್ಬಂಧ ತೆರವು
Next articleಮನೆಯಲ್ಲಿ ಜನ ಮಲಗಿರುವಾಗಲೇ ಕನ್ನ ಹಾಕಿದ ಕಳ್ಳರು: ಕೋಟೆನಗರಿಯಲ್ಲೊಂದು ಬೆಚ್ಚಿ ಬೀಳಿಸುವ ಘಟನೆ