ಗುಪ್ತಚರ ಇಲಾಖೆ ಮುಖ್ಯಸ್ಥ ಎತ್ತಂಗಡಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣದ ಬಗ್ಗೆ ಗುಪ್ತಚರ ಇಲಾಖೆ ವೈಫಲ್ಯವೇ ನೇರ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಗುಪ್ತಚರ ಇಲಾಖೆ ನೂತನ ಎಡಿಜಿಪಿಯಾಗಿ ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.